February 2, 2026

ಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ರೋಲರ್ ವಾಹನವಿದ್ದ ಲಾರಿ

0
image_editor_output_image-1078471353-1707808496912.jpg

ಬಂಟ್ವಾಳ: ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ಫೆ. 13ರ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ನಡೆದಿದೆ.

ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾದ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ.

ಪವಿತ್ರ ಗುತ್ತಿಗೆ ಸಂಸ್ಥೆಗೆ ಸೇರಿದ ಸೊತ್ತುಗಳು ಇದಾಗಿದ್ದು, ಬೆಂಜನಪದವು ಸೈಟ್ ನಿಂದ ಪುತ್ತೂರು ಸವಣೂರು ಎಂಬಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ಅನ್ನು ಲಾರಿಯಲ್ಲಿ ತುಂಬಿಸಿಕೊಂಡು ಹೋಗುವ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೆಯ ಅಡಿಭಾಗದಲ್ಲಿ ಕ್ರಾಸ್ ಮಾಡಲು ಸಾಧ್ಯವಾಗದೆ ಸಿಲುಕಿಕೊಂಡಿದೆ.

ರೈಲ್ವೆಯ ಓವರ್ ಬ್ರಿಡ್ಜ್ ನ ಎತ್ತರಕ್ಕಿಂತ ಅಧಿಕ ಎತ್ತರದಲ್ಲಿ ಲಾರಿಯ ಲೋಡ್ ಮಾಡಿಕೊಂಡಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಘಟನೆಯಿಂದ ರೈಲ್ವೆ ಇಲಾಖೆಗೆ ಸೇರಿದ ಕಬ್ಬಿಣದ ರಾಡ್ ತುಂಡಾಗಿ ಲಾರಿಯ ಮೇಲೆ ಬಿದ್ದಿದೆ. ‌ಅದೃಷವಶಾತ್ ಬೇರೆ ಯಾವುದೇ ವಾಹನಗಳ‌ ಮೇಲೆ ಬೀಳದೆ ಇದ್ದು, ಯಾವ ಅಪಾಯಕಾರಿ ಘಟನೆ ನಡೆದಿಲ್ಲ.

Leave a Reply

Your email address will not be published. Required fields are marked *

error: Content is protected !!