March 21, 2026

ತಾಯಿ, ಮಗಳು ನದಿಗೆ ಬಿದ್ದು ಆತ್ಮಹತ್ಯೆ

0
image_editor_output_image282036227-1707816638779.jpg

ಕಲಬುರಗಿ: ಜೀವನದಲ್ಲಿ ಜಿಗುಪ್ಸೆಗೊಂಡ ತಾಯಿ ಮತ್ತು ಮಗಳು ಜಿಲ್ಲೆಯ ಶಹಾಬಾದ್ ಬಳಿಯ ಕಾಗಿಣಾ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ ಎಂದು ಗೊತ್ತಾಗಿದೆ.
ಸೋಮವಾರ ಸಾಯಂಕಾಲದಿಂದ ನಾಪತ್ತೆಯಾಗಿದ್ದರು. ರಾತ್ರಿ ಕಾಗಿಣಾ ನದಿಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಶಹಾಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!