AIMIM ಮುಖಂಡನ ಗುಂಡಿಕ್ಕಿ ಹತ್ಯೆ
ಬಿಹಾರದ ಗೋಪಾಲ್ ಗಂಜ್‌ನಲ್ಲಿ AIMIM ಮುಖಂಡ ಅಬ್ದುಲ್ ಸಲಾಂ ಅಲಿಯಾಸ್ ಅಸ್ಲಂ ಮುಖಿಯಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಗೋಪಾಲಗಂಜ್ ಉಪಚುನಾವಣೆಯಲ್ಲಿ ಅಬ್ದುಲ್ ಸಲಾಂ ಎಐಎಂಐಎಂ ಅಭ್ಯರ್ಥಿಯಾಗಿದ್ದರು. ಜತೆಗೆ ಪಕ್ಷದ ರಾಜ್ಯ ಸಹ ಕಾರ್ಯದರ್ಶಿಯೂ ಆಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿಯು ಬಿಹಾರ ಸರ್ಕಾರವನ್ನು ತೀವ್ರವಾಗಿ ಖಂಡಿಸಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯ ತುರ್ಕಹಾ ಸೇತುವೆ ಬಳಿ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಕ್ರಿಮಿನಲ್ ಗಳು ಈ ಕೃತ್ಯ ಎಸಗಿದ್ದಾರೆ.
ಅದೇ ಸಮಯದಲ್ಲಿ, ಗೋಪಾಲಗಂಜ್ ಪೊಲೀಸರ ಎಸ್‌ಐಟಿ ಈ ಕೊಲೆ ಪ್ರಕರಣದ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದ್ದು, ಅವರನ್ನು ನಿರಂತರವಾಗಿ ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ಆರೋಪಿಗಳ ಬೈಕ್ ವಶಪಡಿಸಿಕೊಂಡಿದ್ದಾರೆ.





