September 20, 2024

ಕಾರ್ಕಳ: ವಿಡಿಯೋಗ್ರಫಿ ಮಾಡುತ್ತಿದ್ದ ಛಾಯಾಗ್ರಾಹಕ ಕುಸಿದುಬಿದ್ದು ಮೃತ್ಯು

0

ಕಾರ್ಕಳ: ಗೃಹಪ್ರವೇಶದ ವಿಡಿಯೋಗ್ರಫಿ ಮಾಡುತ್ತಿದ್ದ ಛಾಯಾಗ್ರಾಹಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.

ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಡ್ತಲ ಗ್ರಾಮ ಕುಕ್ಕುಜೆಯಲ್ಲಿ ಗೃಹಪ್ರವೇಶದ ವಿಡಿಯೋಗ್ರಫಿ ಮಾಡುತ್ತಿದ್ದರು.

ಈ ವೇಳೆ ಸುಸ್ತಿನ ಅನುಭವ ಆಗಿ ಏಕಾಏಕಿ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಈ ವೇಳೆಗಾಗಲೇ ದೀಪಕ್ ಕೊನೆಯುಸಿರೆಳೆದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!