February 2, 2026

ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾ ಪಲ್ಟಿ: ಓರ್ವ ವಿದ್ಯಾರ್ಥಿ ಮೃತ್ಯು

0
image_editor_output_image-183416722-1707910423749.jpg

ಚೆನ್ನೈ: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾವೊಂದು ಪಲ್ಟಿಯಾಗಿ 10 ವರ್ಷದ ಬಾಲಕ ಮೃತಪಟ್ಟು ಇತರ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ.

ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ.

ಆಟೋವನ್ನು ಸುಂದರ್‌ ಎನ್ನುವವರು ಚಲಾಯಿಸುತ್ತಿದ್ದರು. ಆಟೋದಲ್ಲಿ 11 ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಕರುಂಗುಲಂ, ಶಿವಂಧಿಪುರಂ ಮತ್ತು ವಿಕ್ರಮಸಿಂಗಪುರದಿಂದ ಮಕ್ಕಳನ್ನು ಹತ್ತಿಸಿಕೊಂಡು ಪ್ರಯಾಣಿಸುತ್ತಿದ್ದ ವೇಳೆ ಅಂಬಾಸಮುದ್ರಂ ಬಳಿ ಚಾಲಕನ ನಿಯಂತ್ರಣ ಆಟೋ ಪಲ್ಟಿಯಾಗಿದೆ. ಪರಿಣಾಮ ವಿದ್ಯಾರ್ಥಿಗಳ ಆಟೋದೊಳಗೆ ಸಿಲುಕಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!