ಬೆಳ್ತಂಗಡಿ: ಹೃದಯಾಘಾತದಿಂದ ಭೂಮಾಪಕ ಮೃತ್ಯು

ಬೆಳ್ತಂಗಡಿ: ಬೆಳ್ತಂಗಡಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನಿಧನರಾಗಿದ್ದಾರೆ.
ವಿಶ್ವನಾಥ ರಾವ್ (45) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಬಂಟ್ವಾಳದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಮತ್ತು ಪುತ್ರನನ್ನು ಅವರು ಅಗಲಿದ್ದಾರೆ.
ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್ ಉಜಿರೆಯಲ್ಲಿ ವಾಸವಾಗಿದ್ದು, ಪರವಾನಗಿ ಹೊಂದಿದ ಭೂಮಾಪಕ ಆಗಿ ಕಳೆದ ೨೦ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರಕ್ತದೊತ್ತಡ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಂಟ್ವಾಳದಲ್ಲಿ ಹೃದಯಾಘಾತವಾಗಿದ್ದು, ಅವರನ್ನು ಬಂಟ್ವಾಳ ಆಸ್ಪತ್ರೆಗೆ ಕರೆತಂದ ವೇಳೆ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.”