ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ 6.20 ಕ್ಕೆ ನಡೆದಿದೆ.
ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಅವಳ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ.
ಅವಳ ಆಧಾರ್ ಕಾರ್ಡ್ ನಲ್ಲಿ c/o ಎಮ್.ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.
ಆಕೆ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದಾಳೆ. ಬಿ.ಸಿ ರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳು ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿ.ಸಿ ರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.
ಆಕೆ ಯಾವ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮತ್ತು ಅವಳ ವಿಳಾಸ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ.
ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞರಾದ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಎಸ್ಐ ದೇವಪ್ಪ, ವಿಜಯಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.




