March 21, 2026

ಮಂಗಳೂರು: ಸೈಂಟ್ ಜೆರೋಸಾ ಶಾಲೆಯ ಬಳಿ ಅಶಾಂತಿಯ ವಾತಾವರಣ ಸೃಷ್ಟಿ: ಶಾಸಕ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಸಹಿತ ಹಲವರ ವಿರುದ್ಧ FIR ದಾಖಲು

0
image_editor_output_image-1006897915-1707976563525.jpg

ಮಂಗಳೂರು: ಮಂಗಳೂರಿನ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಹಿಂದೂ ಧರ್ಮ, ದೇವರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಇಬ್ಬರು ಪಾಲಿಕೆ ಸದಸ್ಯರುಗಳು ಮತ್ತು ಇತರರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಯ ಶಿಕ್ಷಕಿ‌ ಯೋರ್ವರು ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಶಾಲೆಯ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದರು ಎಂದು ಹೇಳಲಾಗಿತ್ತು.

ಫೆ.12ರಂದು ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾಭರತ್ ಶೆಟ್ಟಿ ಶಾಲೆಯ‌‌ ಮುಂದೆ ಜಮಾಯಿಸಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕನ್ನು ಶಾಲೆಯ ವಿರುದ್ಧ ಎತ್ತಿಕಟ್ಟುವಂತಹ ಪ್ರಯತ್ನ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!