ಮಂಗಳೂರು: ಜೆರೋಸಾ ಶಾಲೆಯ ವಿವಾದದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ದಿಢೀರ್ ವರ್ಗಾವಣೆ
ಮಂಗಳೂರು: ಜೆರೋಸಾ ಶಾಲೆಯ ವಿವಾದ ವಿಚಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಲೋಪವಾದ ಬಗ್ಗೆ ಆರೋಪ ಕೇಳಿಬಂದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಶಾಲೆಯಲ್ಲಾದ ವಿವಾದ ನಿರ್ವಹಣೆಯಲ್ಲಿ ವಿಫಲರಾಗಿರುವ ಕುರಿತು ಡಿಡಿಪಿಐ ಹಾಗೂ ಇತರ ಅಧಿಕಾರಿಗಳ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು. ಮಂಗಳವಾರ ಶಾಲೆಗೆ ಭೇಟಿ ನೀಡಿದ್ದ ಮಾಜಿ ಸಚಿವ ರಮಾನಾಥ ರೈ, ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಸರಿಪಡಿಸಬೇಕಿತ್ತು. ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಹಿಂದುಳಿದಿದ್ದೇ ಘಟನೆಗೆ ಕಾರಣ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.




