March 21, 2026

ನೆಲ್ಯಾಡಿ: ಚಲಿಸುತ್ತಿದ್ದ ಡಾಂಬರು ಸಾಗಾಟದ ಲಾರಿಯಲ್ಲಿ ಆಕಸ್ಮಿಕ ಬೆಂಕಿ

0
image_editor_output_image998215094-1707977462386.jpg

ನೆಲ್ಯಾಡಿ: ಚಲಿಸುತ್ತಿದ್ದ ಡಾಂಬರು ಸಾಗಾಟದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಭಾಗಶಃ ಸುಟ್ಟು ಹೋದ ಘಟನೆ ಫೆ.13ರ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಲಾರಿಯು ಉದನೆ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವಾಗುತ್ತಿದಂತೆ ಚಾಲಕ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಪಾರಾಗಿದ್ದಾರೆ. ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಯ ಕಾರ್ಮಿಕರು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಬೆಂಕಿಗೆ ಶಾರ್ಟ್‌ ಸರ್ಕ್ನೂಟ್‌ ಕಾರಣ ಎಂದು ಹೇಳಲಾಗಿದೆ

Leave a Reply

Your email address will not be published. Required fields are marked *

You may have missed

error: Content is protected !!