March 21, 2026

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

0
Situation-tense-after-foreign-student-falls-to-death-in-Karnataka-3080740904.jpg

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.

ಕೆ.ಎ. ಸ್ಟೋರ್ ಮಾಲಕ ದಾವೂದು ಎಂಬವರ ಪುತ್ರಿ ಹಫೀಝ (17) ಮೃತ ಬಾಲಕಿ.

ಹಫೀಝ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದು, ಇಂದು ಬೆಳಗ್ಗೆ ಎದ್ದೇಳುವಾಗ ಮೃತಪಟ್ಟಿದ್ದಳು.

ಮಲಗಿದಲ್ಲೇ ಹೃದಯಾಘಾತಕ್ಕೀಡಾಗಿ ಹಫೀಝ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮೃತಳು ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!