July 3, 2026

ತೃಣಮೂಲ ಕಾಂಗ್ರೆಸ್ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಿಮಿ ಚಕ್ರವರ್ತಿ

0
IMG-20240215-WA0039.jpg


ಕೋಲ್ಕತ್ತಾ: ನಟಿ ಮತ್ತು ಸಂಸದೆ ಮಿಮಿ ಚಕ್ರವರ್ತಿ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇನ್ನು ರಾಜೀನಾಮೆಯನ್ನು ಇನ್ನೂ ಅಂಗೀಕರಿಸಲಾಗಿಲ್ಲ. ಪಕ್ಷದ ಸ್ಥಳೀಯ ನಾಯಕರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ರಾಜೀನಾಮೆ ನೀಡಿರುವುದಾಗಿ ಜಾದವ್‌ಪುರದ ಸಂಸದೆ ಹೇಳಿದ್ದಾರೆ.

ಮಿಮಿ ಚಕ್ರವರ್ತಿ ಅವರು 2019 ರಲ್ಲಿ ಜಾದವ್‌ಪುರದಿಂದ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಲೋಕಸಭೆಗೆ ಆಯ್ಕೆಯಾದರು.

Leave a Reply

Your email address will not be published. Required fields are marked *

You may have missed

error: Content is protected !!