July 3, 2026

3.8 ಲಕ್ಷ ಕೋಟಿ ರೂ. ಗಾತ್ರದ ರಾಜ್ಯ ಬಜೆಟ್ ಮಂಡನೆ:

0
image_editor_output_image1024726738-1708061049417.jpg

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.

ನೆರೆ ರಾಜ್ಯಗಳ ಮದ್ಯದ ಬೆಲೆಗೆ ಅನುಗುಣವಾಗಿ ದರ ಪರಿಷ್ಕರಣೆ, ಬಿಯ‌ರ್ ಸೇರಿದಂತೆ ಎಲ್ಲಾ ಬ್ರಾಂಡ್‌ಗಳ ಬೆಲೆ ಹೆಚ್ಚಳ, ಮದ್ಯದ ದರ ಮತ್ತೆ ಹೆಚ್ಚಿಸಲು ನಿರ್ಧಾರ, ಜನರಲ್ಲಿ ಮತ್ತೆ ವಿಶ್ವಾಸ ಮೂಡಿಸುವುದು ನಮ್ಮ ಆದ್ಯತೆ ನೀಡಲಾಗಿದೆ.

ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್‌ ಅಲ್ಲ. 5 ಗ್ಯಾರಂಟಿ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 5 ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳ್ತಿದ್ದಾರೆ. ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

You may have missed

error: Content is protected !!