ರಾಜ್ಯ ಬಜೆಟ್-2024: ದ.ಕ. ಜಿಲ್ಲೆಗೆ ಬಂಪರ್ ಕೊಡುಗೆ
ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ರಾಜ್ಯದಲ್ಲಿ 7 ಹೊಸ ತಾಲೂಕು ಆಸ್ಪತ್ರೆಗಳ ಸ್ಥಾಪನೆ, ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ, 1,500 ವಿಶೇಷ ಚೇತನರಿಗೆ ದ್ವಿಚಕ್ರ ವಾಹನ ನೀಡಲು ನಿರ್ಧಾರ, ಮೀನುಗಾರಿಕೆ ಕ್ಷೇತ್ರಕ್ಕೆ ₹3 ಸಾವಿರ ಕೋಟಿ ವೆಚ್ಚದ ಯೋಜನೆ, ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ₹400 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದರು




