February 3, 2026

ನಾಳೆ ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ

0
Siddaramaiah-1595353585-696x480-940857748.jpg

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 17ರ ಶನಿವಾರದಂದು ಮಂಗಳೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಿ, 2:15ಕ್ಕೆ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕರ್ತರನ್ನು ಒಗ್ಗೂಡಿಸಲು ಹಾಗೂ ಲೋಕಸಭಾ ಚುನಾವಣೆಗೆ ಸಿದ್ಧತೆಯಾಗಿ ಫೆ. 17ರಂದು ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಸಮಾವೇಶ ಆಯೋಜಿಸಲಾಗಿದ್ದು, ರಾಜ್ಯದೆಲ್ಲೆಡೆಯಿಂದ ಕೈ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಬಳಿಕ ಸಿಎಂ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, 5:30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್‌ನ ಮುಖ್ಯ ಸಚೇತಕರು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!