February 3, 2026

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ಅಂಜಾರಿಯಾ ನೇಮಕ

0
n5837172101708094218046a92fe1a61d0470d9404403e4d7c59c67e49b7be5c4856cfa0bd09f3effa5fc7e.jpg

ಬೆಂಗಳೂರು: ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಫೆಬ್ರವರಿ 7 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು. ಹಾಲಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಫೆಬ್ರವರಿ 24 ರಂದು ನಿವೃತ್ತರಾದ ನಂತರ ನ್ಯಾಯಮೂರ್ತಿ ಅಂಜಾರಿಯಾ ಅವರು ಹೈಕೋರ್ಟಿನ ಚುಕ್ಕಾಣಿ ಹಿಡಿಯಲಿದ್ದಾರೆ.

2011ರ ನವೆಂಬರ್ 21ರಂದು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಪದೋನ್ನತಿ ಪಡೆಯುವ ಮೊದಲು ಅವರು ಗುಜರಾತ್ ಹೈಕೋರ್ಟ್ ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಅಭ್ಯಾಸ ಮಾಡಿದರು.

Leave a Reply

Your email address will not be published. Required fields are marked *

error: Content is protected !!