February 3, 2026

ಹಾಸ್ಟೆಲ್ ನಲ್ಲಿ ಕಿರುಕುಳ: ಮನನೊಂದು ವಿದ್ಯಾರ್ಥಿ  ಆತ್ಮಹತ್ಯೆ

0
image_editor_output_image-1985302722-1708147103011.jpg

ರಾಯಚೂರು: ವಸತಿ ಗೃಹದಲ್ಲಿ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ಇಂದು ನಡೆದಿದೆ.

ಹಿರೇಹುಸೇನಪ್ಪ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಿರೇಹುಸೇನಪ್ಪ ಅಂಬೇಡ್ಕರ್ ವಸತಿ ನಿಲಯದಲ್ಲಿದ್ದುಕೊಂಡು ಓದುತ್ತಿದ್ದ. ಹಿರೇಹುಸೇನಪ್ಪ ವಸತಿ ನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಶ್ನಿಸಿದ್ದನು.

ಅದಕ್ಕೆ ಆತನಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಬಂದಿದೆ

Leave a Reply

Your email address will not be published. Required fields are marked *

error: Content is protected !!