ಉಡುಪಿ: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಉಡುಪಿ: ವಿದ್ಯಾರ್ಥಿಯೋರ್ವ ಆರನೇ ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಣಿಪಾಲದ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ.
ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್(20) ಆತ್ಮಹತ್ಯೆ ಮಾಡಿಕೊಂಡ ಯುವಕ.
ಎಂಸಿಎಚ್ ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿಯಾಗಿದ್ದರು.
ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲಾಗಿತ್ತು.




