February 3, 2026

ಮಂಗಳೂರು : ಏರ್‌ಫೊರ್ಟ್‌‌ ವಾಶ್‌ರೂಂನಲ್ಲಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನ ವಶ
 

0
17-02-2024akairport.jpg

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ಫೆ.17ಶನಿವಾರ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಇಮಿಗ್ರೇಷನ್ ಆಗಮನ ಪ್ರದೇಶದ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45,44,600 ರೂ.ಮೌಲ್ಯದ 733 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ವಾಶ್‌ರೂಮ್ ಒಂದರ ಡ್ರೈನೇಜ್ ಚೇಂಬರ್‌ನಲ್ಲಿ ಇರಿಸಲಾಗಿದ್ದ ಕಪ್ಪು ಬಣ್ಣದ ಪೌಚ್‌ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನ ಪತ್ತೆಯಾಗಿದೆ.ಇದನ್ನು ವಾಶ್ ರೂಂನಲ್ಲಿ ಇಟ್ಟಿರುವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕಸ್ಟಮ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.”

Leave a Reply

Your email address will not be published. Required fields are marked *

error: Content is protected !!