February 3, 2026

ಶಾಲಾ ವಿದ್ಯಾರ್ಥಿಗಳಿಂದ ಕಾರು ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕ: ಫೋಟೊ ವೈರಲ್

0
image_editor_output_image-326109824-1708323587861.jpg

ವಿಜಯಪುರ: ಇದೀಗ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ವಿರೇಶ್ವರ ವೃತ್ತದ ಬಳಿಯ ಶಾಸಕರ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ತನ್ನ ಕಾರನ್ನು ವಿದ್ಯಾರ್ಥಿಗಳಿಂದ ಸ್ವಚ್ಛಗೊಳಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಮುಖ್ಯ ಶಿಕ್ಷಕ ಬಸವರಾಜ ರಕ್ಕಸಗಿ ಅವರು ಶಾಲಾ ಆವರಣದಲ್ಲಿಯೇ ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಸ್ವಚ್ಚ ಮಾಡಿಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಕಾರ್ ಸ್ವಚ್ಛ ಮಾಡುತ್ತಿರುವ ವಿಡಿಯೋ ಸ್ಥಳಿಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.

ಇದರ ವಿಡಿಯೋ ವೈರಲ್ ಆಗಿದ್ದು, ವಿದ್ಯಾರ್ಥಿಗಳನ್ನು ಸ್ವಂತ ಕೆಲಸಕ್ಕೆ ಬಳಕೆ ಮಾಡಿಕೊಂಡ ಮುಖ್ಯ ಶಿಕ್ಷಕನ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!