February 3, 2026

ಮದುವೆ ಮುಗಿಸಿ ಬೈಕ್‌ನಲ್ಲಿ  ಮನೆಗೆ ಹೋಗುತ್ತಿದ್ದಾಗ ಹಿಂಬದಿಯಿಂದ ಕಾರು ಢಿಕ್ಕಿ: ದಂಪತಿ ಮೃತ್ಯು

0
image_editor_output_image458328300-1708407894429.jpg

ಹಾಸನ: ಮದುವೆ ಮುಗಿಸಿ ಬೈಕ್‌ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ದಂಪತಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಡ-ಹೆಂಡತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್‌ಪೋಸ್ಟ್ ಬಳಿ ನಡೆದಿದೆ.

ಚಂದ್ರೇಗೌಡ (52), ಹೇಮಲತಾ (45) ಮೃತ ದುರ್ದೈವಿಗಳು. (ಫೆ.19) ಬೆಳಗ್ಗೆ ಉದಯಪುರದಲ್ಲಿ ಸಂಬಂಧಿಕರ ಮದುವೆಗೆ ಬೈಕ್‌ನಲ್ಲಿ ದಂಪತಿ ತೆರಳಿದ್ದರು.

ಮಧ್ಯಾಹ್ನದ ವೇಳೆಗೆ ಮದುವೆ ಮುಗಿಸಿ ಅದೇ ಬೈಕ್‌ನಲ್ಲಿ ಚನ್ನರಾಯಪಟ್ಟಣಕ್ಕೆ ವಾಪಾಸ್ ಆಗುತ್ತಿದ್ದರು. ಬರಗೂರು ಹ್ಯಾಂಡ್‌ಪೋಸ್ಟ್ ಬಳಿಯ ತಿರುವಿನಲ್ಲಿ ತಮಿಳುನಾಡು ನೋಂದಣಿ ಇರುವ ಕಾರು ವೇಗವಾಗಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

error: Content is protected !!