ಜೈ ಭಾರತ್ ಮಾತಾ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷನ ಬಂಧನ
ಕಲಬುರಗಿ: ಕೋರ್ಟ್‌ನಿಂದ ವಾರೆಂಟ್ ಜಾರಿಯಾದರೂ ಸಹ ನ್ಯಾಯಾಲಯಕ್ಕೆ ಹಾಜರಾಗದ ಆರೋಪದ ಮೇಲೆ ಜೈ ಭಾರತ್ ಮಾತಾ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ, ನಿರಗುಡಿ ಹವಾ ಮಲ್ಲಿನಾಥ್ ಮುತ್ಯಾನನ್ನು ಸೋಮವಾರ ಎಂ.ಬಿ ನಗರ ಪೊಲೀಸರು ಬಂಧಿಸಿದ್ದಾರೆ.
2017ರ ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಕಲಬುರಗಿಯ ಎರಡನೇ ಹೆಚ್ಚುವರಿ ನ್ಯಾಯಲಯದಿಂದ ವಾರೆಂಟ್ ಜಾರಿಗೊಳಿಸಿತ್ತು. ನೋಟಿಸ್ ಜಾರಿಯಾದರೂ ಸಹ ನ್ಯಾಯಾಲಯಕ್ಕೆ ಹಾಜರಾಗದ ಹವಾ ಮಲ್ಲಿನಾಥ್ ಮುತ್ಯಾನನ್ನು ಸೋಮವಾರ ಕೋರ್ಟ್‌ಗೆ ಹಾಜರಾದ ಸಂದರ್ಭದಲ್ಲಿ ಬಂಧಿಸಲಾಗಿದೆ.




