ವಿದ್ಯಾರ್ಥಿನಿಯನ್ನು ಚುಡಾಯಿಸಿದ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿತ
ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯನ್ನು ಚುಡಾಯಿಸಿದ ಆರೋಪ ಸಂಬಂಧ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿ ಘಟನೆ ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಆರೋಪ ಕೇಳಿಬಂದಿದ್ದು, ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ವಾಪಸಂದ್ರದಲ್ಲಿರುವ ಬಾಲಕಿಯರ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿಯನ್ನು ಪಿಯು ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಚುಡಾಯಿಸಿದ್ದಾನೆ. ಇದರಿಂದ ಕೆರಳಿದ ಸಾರ್ವಜನಿಕರು ಆತನನ್ನು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿರುವ ಗೋಡೌನ್ನಲ್ಲಿ ಹಾಕಿ ಹಿಗ್ಗಾಮುಗ್ಗವಾಗಿ ಥಳಿಸಿದ್ದಾರೆ. ಸಾರ್ವಜನಿಕರೊಂದಿಗೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ಮಹಂತೇಶ್ ಕೂಡ ವಿದ್ಯಾರ್ಥಿಗೆ ಥಳಿಸಿದ್ದಾರೆ.




