ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಅಪರಿಚಿತ ವಾಹನ: ರಿಕ್ಷಾದಲ್ಲಿದ್ದ 9 ಮಂದಿ ಮೃತ್ಯು
ಬಿಹಾರ್: ಅಪರಿಚಿತ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಒಂಬತ್ತು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಬಿಹಾರದ ಲಖಿಸರಾಯ್-ಸಿಕಂದ್ರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಆಟೋ ಲಖಿಸರಾಯ್‌ನಿಂದ ಸಿಕಂದ್ರ ಕಡೆಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ವೇಳೆ ಆಟೋರಿಕ್ಷಾದಲ್ಲಿ ಸುಮಾರು 15 ಮಂದಿ ಇದ್ದರು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.




