February 3, 2026

ಸರಕಾರಿ ಉದ್ಯೋಗದ ಹೆಸರಿನಲ್ಲಿ ವಂಚನೆ: ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ಸಹಿತ ದಂಪತಿಯ ಬಂಧನ

0
image_editor_output_image2088015275-1708493348077.jpg

ಬೆಂಗಳೂರು: ಉದ್ಯೋಗ ಕೊಡಿಸೋದಾಗಿ ಹೇಳಿ ಯುವಕರಿಗೆ ವಂಚನೆ ಮಾಡುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಕೆಲಸ ಕೊಡಿಸುವ ಆಸೆ ತೋರಿಸಿ ಲಕ್ಷಾಂತರ ರೂಪಾಯಿ‌ ಹಣ ಪಡೆದು ವಂಚನೆ ಮಾಡುತ್ತಿದ್ದ ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು.

6 ಲಕ್ಷ ಹಣ ಪಡೆದು ಕೆಲಸ ಕೊಡಿಸದೇ ಕಳ್ಳಾಟ ಆಡ್ತಿದ್ದರು. ಸದ್ಯ ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ವಿದ್ಯಾರಣ್ಯಪುರ ಠಾಣೆಯಲ್ಲೇ ಆರೋಪಿಗಳ ವಿರುದ್ಧ 3 ಪ್ರಕರಣ ದಾಖಲಿರೋದು ಪತ್ತೆಯಾಗಿದೆ. ನಗರದ ಹಲವು ಠಾಣೆಗಳಲ್ಲೂ ದಂಪತಿ ವಿರುದ್ಧ ಕೇಸ್ ದಾಖಲಾಗಿವೆ.
ಬಂಧಿತರಿಂದ 2 ಲಕ್ಷ ನಗದು ಹಣ, 4 ಫೋನ್, ಒಂದು‌‌ ದ್ವಿಚಕ್ರ ವಾಹನ, 6 ಬ್ಯಾಂಕ್ ಅಕೌಂಟ್ ಗೆ ಸೇರಿದಂತೆ 16 ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ವಶಕ್ಕೆ ಪಡೆಯಲಾಗಿದೆ. 11 ವಿವಿಧ ಕಂಪನಿಯ ವಾಚ್ ಗಳು, ಚಿನ್ನದಂತೆ ಕಾಣುವ 2 ನಕಲಿ‌ ಬ್ರೇಸ್ ಲೈಟ್, 1 ಚೈನ್, 2 ಉಂಗುರ, 2 ಪೆಂಡೆಂಟ್ಗಳನ್ನು ಜಪ್ತಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!