ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ
ಬೆಂಗಳೂರು: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಫೆಬ್ರವರಿ 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದರು, ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ರಾಜ್ಯ ಆಂತರಿಕ ಭದ್ರತಾ ವಿಭಾಗದ(ಐಎಸ್ಡಿ) ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆಗಿ ಪ್ರತಾಪ್ ರೆಡ್ಡಿ ಕಾರ್ಯನಿರ್ವಹಿಸುತ್ತಿದ್ದರು.
ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಪ್ರತಾಪ್ ರೆಡ್ಡಿ, ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದರು. 1991ರ ಬ್ಯಾಚ್ನ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಈ ವರ್ಷದ ಜೂನ್ ಕೊನೆಯ ವಾರದಲ್ಲಿ ನಿವೃತ್ತರಾಗಲಿದ್ದರು. ಹೀಗಿರುವಾಗಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು.




