ಉಡುಪಿ: ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಭೀಕರ ಅಗ್ನಿ ಅವಘಡ ಪ್ರಕರಣ: ಬೋಟ್ ಮಾಲಕರಿಗೆ 1.75 ಕೋಟಿ ರೂ. ಪರಿಹಾರ ಮಜೂರು ಮಾಡಿದ ಸರಕಾರ
ಉಡುಪಿ : ಕಳೆದ ನವೆಂಬರ್ ತಿಂಗಳಿನಲ್ಲಿ ಉಡುಪಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಭೀಕರ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಮಜೂರು ಮಾಡಿದೆ.
ಇದೇ ರೀತಿ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಲಾಗಿದೆ.




