February 3, 2026

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಹೆಸರಿನಲ್ಲಿ ನಕಲಿ ಟ್ರಸ್ಟ್: ದೇಣಿಗೆ ಹಣ ಕಳುಹಿಸಿ ವಂಚನೆಗೊಳಗಾದ ಭಕ್ತರು

0
image_editor_output_image-793626426-1708498418245.jpg

ಉಡುಪಿ: ಉಡುಪಿಯ ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ ನಕಲಿ ಟ್ರಸ್ಟ್ ಶುರುವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಹರಿದಾಡುತ್ತಿದೆ.

ದೇಣಿಗೆ ಹರಕೆ ಸಲ್ಲಿಸುವ ಭಕ್ತರು ಇದಕ್ಕೆ ಹಣ ಕಳಿಸಿದ್ದಾರಂತೆ. ಭಕ್ತ ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‍ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಅಂತಾ ಸ್ಪಷ್ಟನೆ ಬಂದಿದೆ. ಹೀಗಾಗಿ ಭಕ್ತರಾಗಿರುವ ರಾಘವೇಂದ್ರ ಹಾಗೂ ಧನಂಜಯ್ ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿರೋದು ಗೊತ್ತಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಕೋಟಿಗ ಟ್ಟಲೆ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಈ ಬಗ್ಗೆ ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!