ಪುತ್ತೂರು: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ: ಮುಕ್ವೆ ನಿವಾಸಿ ಸಫ್ವಾನ್ ಗಂಭೀರ
ಪುತ್ತೂರು: ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಲ್ಲರ್ಪೆ ಸಮೀಪ ನಡೆದ ಬಗ್ಗೆ ವರದಿಯಾಗಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಮುಕ್ವೆ ನಿವಾಸಿ ಅಬ್ದುಲ್ಲಾ ರವರ ಮಗ ಸಫ್ಫಾನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಘಟನೆಯಿಂದಾಗಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎನ್ನಲಾಗಿದೆ.




