ಮಂಗಳೂರು: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಸಿಸಿಬಿ ಕಾರ್ಯಾಚರಣೆಯಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರಲ್ಲಿ ಒಬ್ಬ ಬರೋಬ್ಬರಿ 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೊಹಮ್ಮದ್ ಅಬ್ದುಲ್ ಫಯಾನ್(26). ಈತ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 23 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ.




