July 3, 2026

ಪುತ್ತೂರು: ಮುರದಲ್ಲಿ ಭೀಕರ ರಸ್ತೆ ಅಪಘಾತ: ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ದಾರಿ ಮಧ್ಯೆ ಮೃತ್ಯು

0
IMG-20240222-WA0046.jpg

ಪುತ್ತೂರು: ಮುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ. ಇನ್ನೋರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಲ್ಲಿ ಡಿಯೋವನ್ನು ಚಲಾಯಿಸುತ್ತಿದವರು ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ.

ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಮುರದಲ್ಲಿ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಪುತ್ತೂರಿನಿಂದ ಕಬಕ ಕಡೆ ತೆರಳುತ್ತಿದ್ದ ಡಿಯೋ ಹಾಗೂ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!