ಷರತ್ತು ಇಲ್ಲದೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಅರುಣ್ ಪುತ್ತಿಲಗೆ ಸೂಚಿಸಿದ್ದೇನೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಪುತ್ತೂರು: “ಷರತ್ತು ಇಲ್ಲದೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಪುತ್ತಿಲ ಪರಿವಾರದ ಅರುಣ್ ಪುತ್ತಿಲಗೆ ಸೂಚಿಸಿದ್ದೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.
ಅರುಣ್ ಪುತ್ತಿಲ ಹಾಗೂ ಬಿ.ವೈ. ವಿಜಯೇಂದ್ರ ನಡುವೆ ಮಾತುಕತೆ ನಡೆದಿದೆ ಎನ್ನುವ ಸುದ್ದಿ ಕಳೆದ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಈಗ ಸ್ವತಃ ರಾಜ್ಯಾಧ್ಯಕ್ಷರೇ ಇದನ್ನು ಒಪ್ಪಿಕೊಂಡಿದ್ದು, ಪುತ್ತಿಲ ತನ್ನನ್ನು ಭೇಟಿ ಆಗಿರುವುದು ನಿಜ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ.