July 27, 2024

ನಿಶ್ಚಿತಾರ್ಥವಾಗಿದ್ದ ಯುವತಿ ನೇಣುಬಿಗಿದು ಆತ್ಮಹತ್ಯೆ

0

ಬೆಂಗಳೂರು: ನೆರೆಮನೆ ಹುಡುಗನ ಪ್ರೀತಿಯಲ್ಲಿ ಬಿದ್ದಿದ್ದ ಯುವತಿಗೆ ಬೇರೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥವಾಗಿದ್ದು, ಹಳೇ ಲವರ್‌ ನ ಕಾಟ ತಾಳಲಾರದೆ ಯುವತಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಗೊಟ್ಟಿಗೆರೆ ಗ್ರಾಮದಲ್ಲಿ ವಾಸವಿದ್ದ ಚಂದ್ರಕಲಾ (19) ನೇಣಿಗೆ ಶರಣಾದ ಯುವತಿಯಾಗಿದ್ದಾಳೆ.ಪಿಯುಸಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಇದ್ದ ಚಂದ್ರಕಲಾ ಪಕ್ಕದ ಮನೆಯ ಅರುಣ್ ಕುಮಾರ್ ನ ಜೊತೆಗೆ ಪ್ರೀತಿಯಲ್ಲಿ ಬಿದ್ದಿದ್ದಳು.

ಹುಡುಗಿ ಮನೆಯವರಿಗೆ ವಿಷಯ ಗೊತ್ತಾಗಿ ಹುಡುಗಿಗೆ ಬುದ್ಧಿವಾದ ಹೇಳಿದ್ದರು. ಆ ಹುಡುಗ ಜೈಲಿಗೆ ಹೋಗಿ ಬಂದಿದ್ದು ವ್ಯಕ್ತಿತ್ವ ಸರಿ ಇಲ್ಲ ಎಂದು ಮನವೊಲಿಸಿ ಕನಕಪುರದ ಪರಿಚಿತರ ಸಂಬಂಧದಲ್ಲಿ ಹುಡುಗನನ್ನು ನೋಡಿ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿದ್ದರು. ಆದರೆ ಜಿಗಣೆ ಬಳಿಯ ನಂಜಾಪುರದ ನೆಂಟರ ಮನೆಗೆ ಹೋಗಿದ್ದ ಚಂದ್ರಕಲಾ ಅಲ್ಲೇ ನೇಣೀಗೆ ಶರಣಾಗಿದ್ದಾಳೆ.

Leave a Reply

Your email address will not be published. Required fields are marked *

error: Content is protected !!