ದುಬೈಯಲ್ಲಿ ರಸ್ತೆ ಅಪಘಾತ: ಉಳ್ಳಾಲದ ಕೋಟೆಕಾರು ಬೀರಿ ನಿವಾಸಿ ವಿದಿಶಾ ಮೃತ್ಯು
ಉಳ್ಳಾಲ: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.
2019ರಲ್ಲಿ ದುಬೈಗೆ ತೆರಳಿ ಎಕ್ಸ್‌ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ. 22ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.