September 25, 2026

ಕ್ರಿಕೆಟ್ ಪಂದ್ಯದ ವೇಳೆ ಹೃದಯಾಘಾತದಿಂದ ಆಟಗಾರ ಮೃತ್ಯು

0
image_editor_output_image-1292566009-1708759526498.jpg

ಬೆಂಗಳೂರು: ನಗರದಲ್ಲಿ ಗುರುವಾರ ಆಡಿಟ್ ಮತ್ತು ಅಕೌಂಟ್ಸ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯ ಪಂದ್ಯದ ವೇಳೆ ಕರ್ನಾಟಕ ತಂಡದ ಆಟಗಾರ ಕೆ.ಹೊಯ್ಸಳ (35) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಆರ್‌ಎಸ್‌ಐ ಕ್ರೀಡಾಂಗಣದಲ್ಲಿ ಆರಂಭವಾದ ಈ ಎರಡು ದಿನಗಳ ಟೂರ್ನಿಯಲ್ಲಿ ಕರ್ನಾಟಕ ತಂಡ ಒಂದು ರನ್‌ನಿಂದ ತಮಿಳುನಾಡು ತಂಡವನ್ನು ಸೋಲಿಸಿದ್ದು, ಈ ಪಂದ್ಯದಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಪಂದ್ಯದ ನಂತರ ಮಧ್ಯಾಹ್ನ ಊಟಕ್ಕೆ ಕುಳಿತುಕೊಳ್ಳುವ ಮೊದಲು ಹಠಾತ್ತಾಗಿ ಅವರು ಕುಸಿದುಬಿದ್ದರು ಎಂದು ತಂಡದ ಸಿಬ್ಬಂದಿ ಒಬ್ಬರು ತಿಳಿಸಿದರು.

 

ಮಧ್ಯಮ ಕ್ರಮಾಂಕದ ಬ್ಯಾಟರ್ ಹಾಗೂ ಮಧ್ಯಮ ವೇಗದ ಬೌಲರ್ ಆಗಿದ್ದ ಅವರು 25 ವರ್ಷದೊಳಗಿನವರ ಟೂರ್ನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಕೆಪಿಎಲ್ ಟೂರ್ನಿಯಲ್ಲೂ ಆಡಿದ್ದರು.

ಹೊಯ್ಸಳ ಅವರ ನಿಧನಕ್ಕೆ ಮಾಜಿ ಕ್ರಿಕೆಟಿಗ ಅಭಿಮನ್ಯು ಮಿಥುನ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!