February 2, 2026

ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಯುವತಿ ಸಾವು

0
image_editor_output_image-270163262-1708759904299.jpg

ಬೆಳಗಾವಿ: ಇಲ್ಲಿನ ಸದಾಶಿವ ನಗರದಲ್ಲಿ ಯುವತಿಯೊಬ್ಬರು ಬುಧವಾರ ರಾತ್ರಿ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಸದಾಶಿವ ನಗರದ ನಿವಾಸಿ ಓಶಾನಾ ರೊನಾಲ್ಲೊ ಪಚೆಕೊ (21) ಮೃತ ಯುವತಿ. ಓಶಾನೋ ತಮ್ಮ ಸಾಕು ನಾಯಿಯನ್ನು ತೆಗೆದುಕೊಂಡು ಟೆರೆಸ್ ಮೇಲೆ ಹೋಗಿದ್ದಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಓಶಾನಾ ಪಾಲಕರು ಎಪಿಎಂಸಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣವನ್ನು ತನಿಖೆ ನಡೆಸುವುದು ಅಗತ್ಯವಾಗಿದೆ. ಇದು ಸಹಜ ಸಾವೋ, ಆತ್ಮಹತ್ಯೆಯೋ ಎಂದು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!