ಕೊಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್ ಟ್ರಾಲಿ: 7 ಮಂದಿ ಮಕ್ಕಳು ಸಹಿತ 15 ಮಂದಿ ಸಾವು
ಲಕ್ನೋ: ಮಾಘ ಪೂರ್ಣಿಮೆಯ ಪ್ರಯುಕ್ತ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹೊರಟಿದ್ದ ಯಾತ್ರಿಕರನ್ನು ಒಳಗೊಂಡ ಟ್ರ್ಯಾಕ್ಟರ್ ಟ್ರಾಲಿ ಕೊಳಕ್ಕೆ ಬಿದ್ದ ಪರಿಣಾಮ 7 ಮಂದಿ ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆ.
ಹಲವರು ಗಾಯಗೊಂಡ ಘಟನೆ ಉತ್ತರಪ್ರದೇಶದ ಕಾಸ್‌ಗಂಜ್‌ನಲ್ಲಿ ನಡೆದಿದೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ





