ಕಲ್ಲಡ್ಕ: ಅನುಗ್ರಹ ಮಹಿಳಾ ಪದವಿಪೂರ್ವ ಕಾಲೇಜು ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಿಗೆ ಪ್ರೇರಣಾ ತರಗತಿ ಕಾರ್ಯಕ್ರಮ
ಬಂಟ್ವಾಳ: ಅನುಗ್ರಹ ಮಹಿಳಾ ಪದವಿಪೂರ್ವ ಕಾಲೇಜು, ಕಲ್ಲಡ್ಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಿಗೆ ಪ್ರೇರಣಾ ತರಗತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಯುತ ಕೆ.ಎಂ.ಅಶ್ರಫ್ ಡೈರೆಕ್ಟರ್ ಎಚ್.ಆರ್. ಎಸ್ ಕರ್ನಾಟಕ, ವೈಸ್ ಚೇರ್ಮನ್ ಹಿರಾ ಇನ್ಸ್ಟಿಟ್ಯೂಷನ್ಸ್ ಬಬ್ಬುಕಟ್ಟೆಇವರು ಆಗಮಿಸಿ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ, ವೃತ್ತಿ ಮತ್ತು ಉಜ್ವಲ ಭವಿಷ್ಯಕ್ಕಾಗಿ ಬೇಕಾಗುವ ಉಪಯುಕ್ತ ಮಾಹಿತಿಗಳೊಂದಿಗೆ ಹಿತನುಡಿದು, ವಿದ್ಯಾರ್ಥಿನಿಯರೊಂದಿಗೆ ಮುಕ್ತ ಸಂವಾದವನ್ನು ನಡೆಸಿದರು.


ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಯಾಸಿನ್ ಬೇಗ್, ಖಜಾಂಚಿಯಾಗಿರುವ ಶ್ರೀಯುತ ಹೈದರ್ ಅಲಿ ನೀರ್ಕಜೆ, ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಹೇಮಲತ ಬಿ.ಡಿ ಹಾಗೂ ಕಾಲೇಜ್ ನ ಸಲಹಾ ಸಮಿತಿಯ ಕಾರ್ಯದರ್ಶಿಯಾದ ಶ್ರೀಮತಿ ಮಮಿತಾ ಎಸ್ ರೈ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಮೌಲ್ಯ ಶಿಕ್ಷಣ ವಿಭಾಗದ ಉಪನ್ಯಾಸಕಿ ಶ್ರೀಮತಿ ಸಫೂರತ್ ಕಿರಾಅತ್ ಪಠಿಸಿದರು.ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಅಶ್ವಿನಿ. ಎ ಇವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.





