ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ.
ಸೋಮಶೇಖರ್ ಅಡ್ಡ ಮತ ಚಲಾಯಿಸಿದ್ದಾರೆ’ ಎಂದು ಬಿಜೆಪಿಯ ಚುನಾವಣಾ ಏಜೆಂಟರೊಬ್ಬರು ಖಚಿತಪಡಿಸಿದರು.
‘ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕಿದ್ದೇನೆ’ ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು.





