ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ ಎಫ್ಐಆರ್
ಚಿಕ್ಕಮಗಳೂರು: ಗೋ ಬ್ಯಾಕ್, ಶೋಭಾ ಹಾಠಾವೋ ಎಂದು ಸಿ,ಟಿ.ರವಿ ಬೆಂಬಲಿಗರು ಅಭಿಯಾನ ನಡೆಸಿದ್ದಾರೆ. ಸದ್ಯ ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ದಂಗಲ್ ಆರಂಭ ಮಾಡಿದ್ದಾರೆ.
ಶೋಭಾ ವಿರುದ್ಧ ಗೋ ಬ್ಯಾಕ್ ಶೋಭಾ ,ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ನಡೆಯುತ್ತಿದೆ. ಟಿಕೆಟ್ ನೀಡದಂತೆ ಕ್ಯಾಂಪೇನ್ ನಡೆಸಲಾಗಿದೆ. ಇದು ಬಿಜೆಪಿ ಹೈ ಕಮಾಂಡ್ ಕೋಪಕ್ಕೂ ಕಾರಣವಾಗಿದೆ. ಇದೆಲ್ಲದರ ನಡುವೆ ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲಾಗಿದೆ.
ಬಸವನಹಳ್ಳಿ ಪೊಲೀಸರಿಂದ ಪೋಸ್ಟರ್ ಸಂಬಂಧ ತನಿಖೆ ನಡೆಸುತ್ತಿದ್ದಾರೆ.





