ಮಂಗಳೂರು: ಖ್ಯಾತ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ನಿಧನ
ಮಂಗಳೂರು: ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಇಂದು ಮುಂಜಾನೆ ನಿಧನರಾಗಿದ್ದಾರೆ.
ಮೂಲತಃ ಕಾರ್ಕಳ ತಾ| ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ” ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ”ಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ ಸಲ್ಲಿಸಿ ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.





