February 3, 2026

ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ: ನಾಗಾಲ್ಯಾಂಡ್ ಸರ್ಕಾರ ಘೋಷಣೆ

0
Screenshot_2021-12-06-10-50-01-49_ae93b0d4e668ae3b9e42de29105ee7f0.jpg

ಕೋಹಿಮಾ: ನಾಗಾಲ್ಯಾಂಡ್‌ನ ಮೊನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಭರಿಸಲಾಗುವುದು ಎಂದು ನಾಗಾಲ್ಯಾಂಡ್ ಸರ್ಕಾರ ಘೋಷಿಸಿದೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಇಂದು (ಸೋಮವಾರ) ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಘಟನೆ ಕುರಿತು ತನಿಖೆ ನಡೆಸಲು ಐಜಿಪಿ ನೇತೃತ್ವದ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವುದಾಗಿಯೂ ರಾಜ್ಯ ಸರ್ಕಾರ ಹೇಳಿದೆ. ನಾಗರಿಕರ ಸಾವಿಗೆ ಕಾರಣವಾದ ಘಟನೆಯನ್ನು ರಾಜ್ಯ ಸರ್ಕಾರವು ಖಂಡಿಸುತ್ತದೆ ಎಂದು ನಾಗಾಲ್ಯಾಂಡ್ ಮುಖ್ಯ ಕಾರ್ಯದರ್ಶಿ ಜೆ.ಅಲಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!