ಶೋಭಾ ಕರಂದ್ಲಾಜೆ ಮತ್ತೆ ಸ್ಪರ್ಧಿಸಿದರೆ 1 ಲಕ್ಷ ನೋಟಾ ವೋಟ್: ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ನಡೆಯುತ್ತಿರುವ ಗೋಬ್ಯಾಕ್ ಶೋಭಕ್ಕ ಅಭಿಯಾನ ಮುಂದುವರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಶೋಭಕರಂದ್ಲಾಜೆ ವಿರುದ್ದ ಆಕ್ರೋಶ ಕೇಳಿ ಬರುತ್ತಿದೆ.
ಇತ್ತೀಚೆಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿರುವ ಶೋಭಾ ಕರಂದ್ಲಾಜೆ ಗೆ ಸ್ವತಃ ಬಿಎಸ್ ವೈ ಯಡಿಯೂರಪ್ಪ ಅವರು ಸಪೋರ್ಟ್ ಮಾಡಿದ್ದಾರೆ.
ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಶೋಭಕ್ಕ ಅಭಿಯಾನ ಮುಂದುವರೆದಿದ್ದು, ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿದರೆ ಒಂದು ಲಕ್ಷ ನೋಟಾ ವೋಟ್ ಹಾಕಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಸಲಾಗಿದೆ.