ಪುತ್ತೂರು: ಮನೆಲ ಚರ್ಚ್ ಪಾದ್ರಿಯಿಂದ ವೃದ್ಧ ದಂಪತಿಗೆ ಹಲ್ಲೆ

ಪುತ್ತೂರು: ಮನೆಲ ಚರ್ಚ್ ಪ್ರಧಾನ ಧರ್ಮಗುರುವೋರ್ವರು ತಮ್ಮದೇ ಚರ್ಚ್ ವ್ಯಾಪ್ತಿಯ ಹಿರಿಯ ಪ್ರಾಯಸ್ಥ ದಂಪತಿಗೆ ಕಾಲರ್ ಎಳೆದು ಎಳೆದಾಡಿ, ಹೊಡೆದ ಘಟನೆ ಫೆ.29 ರಂದು ನಡೆದಿದೆ.
ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ ಗ್ರೆಗರಿ ಮೊಂತೇರೊ(79ವ.) ದಂಪತಿ ಮನೆಗೆ ಚರ್ಚ್ ಧರ್ಮಗುರು ಫಾ.ನೆಲ್ಸನ್ ಓಲಿವೆರಾರವರು ಮನೆ ಶುದ್ಧ ಭೇಟಿ ನಿಮಿತ್ತ ತೆರಳಿದ್ದರು. ಈ ಸಂದರ್ಭದಲ್ಲಿ ಧರ್ಮಗುರು ಫಾ.ನೆಲ್ಸನ್ ರವರು ಪ್ರಾಯಸ್ಥ ದಂಪತಿ ಚರ್ಚ್ ಗೆ ಯಾವುದೇ ದೇಣಿಗೆ, ವಂತಿಗೆ ನೀಡದೆ ಸಹಕರಿಸುತ್ತಿಲ್ಲ ಎಂದೆಲ್ಲ ಹೇಳಿ ಆ ದಂಪತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಮಾತ್ರವಲ್ಲ ಕಾಲರ್ ಹಿಡಿದು ಮಾರುದ್ಧ ದೂರ ಎಳೆದುಕೊಂಡು ಹೋಗಿ ಹೊಡೆಯುತ್ತಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ