May 6, 2026

ಉದ್ಯಾವರ: ನಿಂತಿದ್ದ ವಾಹನಕ್ಕೆ ಸ್ಕೂಟರ್ ಢಿಕ್ಕಿ: ಯುವಕ ಮೃತ್ಯು, ತಾಯಿ ಗಂಭೀರ

0
image_editor_output_image1073625862-1709496037584.jpg

ಉಡುಪಿ: ನಿಂತಿದ್ದ ವಾಹನಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಆತನ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಮೃತರನ್ನು ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಅಝೀಝ್ ಎಂಬವರ ಪುತ್ರ ಮುಫ್ರೀನ್(18) ಎಂದು ಗುರುತಿಸಲಾಗಿದೆ. ಸಹಸವಾರೆಯಾಗಿದ್ದ ಮೃತರ ತಾಯಿ ಹಾಜಿರಾ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ ಮುಫ್ರೀನ್ ತನ್ನ ತಾಯಿಯನ್ನು ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದ್ವಿಚಕ್ರ ವಾಹನವೊಂದರಲ್ಲಿ ಕರೆದೊಯ್ಯುತ್ತಿದ್ದ ವೇಳೆ ಉದ್ಯಾವರ ಹಲೀಮಾ ಸಾಬ್ಜು ಆಡಿಟೋರಿಯಂ ಮುಂದೆ ನಿಲ್ಲಿಸಲಾಗಿದ್ದ ಬೊಲೆರೋ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

error: Content is protected !!