ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದ ನಿಶಾನಿ ಬೆಟ್ಟದಲ್ಲಿ ವೃದ್ಧನ ಶವವೊಂದು ಪತ್ತೆಯಾಗಿದೆ.
ಕಾಡಾನೆ ದಾಳಿಗೆ ವೃದ್ಧ ಬಲಿ ಆಗಿರುವ ಶಂಕೆ ವ್ಯಕ್ತವಾಗಿದೆ. ನಿಶಾನಿ ಬೆಟ್ಟಕ್ಕೆ ಚಾರಣ ತೆರಳಿದವರಿಗೆ ವೃದ್ಧನ ಶವ ಕಂಡು ಬಂದಿದ್ದು, ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ಅಪ್ಪಚ್ಚ (60) ಮೃತ ವ್ಯಕ್ತಿ. ನಿನ್ನೆ ಸಂಜೆಯಿಂದ ಅಪ್ಪಚ್ಚ ಕಾಣೆಯಾಗಿದ್ದು, ಇಂದು ಬೆಟ್ಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನಾ ಸ್ಥಳ ಮತ್ತು ಆಸುಪಾಸಿನಲ್ಲಿ ಆನೆ ನಡೆದಾಡಿದ ಹೆಜ್ಜೆ ಗುರುತುಗಳು ಕಂಡುಬಂದಿದ್ದರಿಂದ ಆನೆ ದಾಳಿಯಿಂದ ಸಾವು ಎಂದು ಸಂಶಯಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.





