May 6, 2026

ಕಡಬ: ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

0
IMG-20240304-WA0001.jpg

ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಆರೋಪಿ ಬಂಧನ:
ಆರೋಪಿ ಎಬಿನ್ (23) ಎಂಬಾತನನ್ನು ಬಂದಿಸಲಾಗಿದೆ. ಈತ ಕೇರಳದವನಾಗಿದ್ದು, ಎಂಬಿಎ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಇಬ್ಬರು ಒಂದೇ ಧರ್ಮಕ್ಕೆ ಸೇರಿದವರಾಗಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!