March 17, 2026

ಕಡಬ:ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಪ್ರೇಮ ವೈಫಲ್ಯದಿಂದ ಕೃತ್ಯ: ದ.ಕ ಎಸ್ಪಿ ಮಾಹಿತಿ

0
image_editor_output_image-684564967-1709533071147

ಕಡಬ: ಬೆಳಗಿನ ಸಮಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಡಬ ಇದರ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ವ್ಯಕ್ತಿಯೊಬ್ಬ ಆಸಿಡ್ ಎರಚಿರುವ ಘಟನೆ ನಡೆದಿದ್ದು, ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೂ ಆಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ.

ಈಗಾಗಲೇ ಆರೋಪಿ ಅಬೀನ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮತ್ತು ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ. ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು. ಯುವಕ ಕೇರಳದ ಮಲಪ್ಪುರಂ ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾಳೆ.
ತನಿಖೆಯ ಪ್ರಗತಿಯನ್ನು ಮುಂದಕ್ಕೆ ನೀಡಲಾಗುವುದು ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

You may have missed

error: Content is protected !!