200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ:
ಜಾಕ್ವೆಲಿನ್ ಫರ್ನಾಂಡಿಸ್ ಗೆ ಲುಕ್ ಔಟ್ ನೋಟಿಸ್
ಮುಂಬೈ: ಲುಕ್ ಔಟ್ ನೋಟಿಸ್ ಕಾರಣದಿಂದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ವಲಸೆ ಅಧಿಕಾರಿಗಳು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ. ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ನಟಿಯ ವಿರುದ್ಧ ಜಾರಿ ನಿರ್ದೇಶನಾಲಯವು ಲುಕ್ ಔಟ್ ನೋಟಿಸ್ ತೆರೆದಿತ್ತು.
ಜಾಕ್ವೆಲಿನ್ ಫೆರ್ನಾಂಡಿಸ್ ಕಾರ್ಯಕ್ರಮವೊಂದಕ್ಕಾಗಿ ದುಬೈಗೆ ತೆರಳಿದ್ದರು. ಸಂಕ್ಷಿಪ್ತ ವಿಚಾರಣೆಯ ನಂತರ ಆಕೆಯನ್ನು ಬಿಡಲಾಗಿದೆ ಮತ್ತು ದೆಹಲಿಯ ತನಿಖಾ ಸಂಸ್ಥೆಯ ಮುಂದೆ ಹಾಜರಾಗಬೇಕೆಂದು ತಿಳಿಸಲಾಗಿದೆ.
200 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ.
ತಿಹಾರ್ ಜೈಲಿನಲ್ಲಿದ್ದ ಉದ್ಯಮಿಯೊಬ್ಬರ ಪತ್ನಿಯಿಂದ 200 ಕೋಟಿ ರೂ ಸುಲಿಗೆ ಮಾಡಿದ್ದಾರೆ ಎಂದು ಆರೋಪ ಸುಕೇಶ್ ಮೇಲಿದೆ. ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಫೆರ್ನಾಂಡಿಸ್ ಹಣಕಾಸಿನ ವಹಿವಾಟುಗಳನ್ನು ನಡೆಸಿರುವ ಪುರಾವೆಗಳನ್ನು ತನಿಖಾ ಸಂಸ್ಥೆ ಬಹಿರಂಗಪಡಿಸಿದೆ.





