March 17, 2026

ಸುಬ್ರಹ್ಮಣ್ಯ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು

0
image_editor_output_image-1624568187-1709540004384.jpg

ಸುಬ್ರಹ್ಮಣ್ಯ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಮೃತರು. ವಿವೇಕಾನಂದ ಅವರು ಮಾ.3 ರಾತ್ರಿ ಗಂಟೆ 9 ಗಂಟೆ ಸುಮಾರಿಗೆ ಸುಬ್ರಹ್ಮಣ್ಯದ ಇಂಜಾಡಿ ಬಳಿ ಆಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!